ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ. ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು.ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ. ಭಾನುವಾರದಿಂದ (ಅ.12) ಮೂರು ದಿನ ಶೂಟಿಂಗ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ಅವರು ನಿಧರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಅಘಾತ ಆಗಿದೆ.
ಶೈನ್ ಶೆಟ್ಟಿ ನಟನೆಯ ಹೊಸ ಸಿನಿಮಾದ ಶೂಟಿಂಗ್ ಸಲುವಾಗಿ ರಾಜು ತಾಳಿಕೋಟೆ ಅವರು ಉಡುಪಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ರಾತ್ರಿ ವಿಶ್ರಾಂತಿ ಪಡೆಯುತ್ತಿರುವಾಗ ಭಾನುವಾರ ರಾತ್ರಿ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಆದರೂ ಕೂಡ ಅವರು ಬದುಕಿ ಉಳಿಯಲಿಲ್ಲ ಎಂದು ಕುಟುಂಬದವರು ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

