ಇತ್ತೀಚೆಗೆ ಮೈಸೂರು ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿ, 6 ಆರೋಪಿಗಳನ್ನು ಬಂಧಿಸಿದ್ದರು. ಇನ್ನು ದಾಳಿ ವೇಳೆ ಮನೆಯಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗಳು ಬೆಳಕಿಗೆ ಬಂದಿದ್ದವು.
ಓಡನಾಡಿ ಸಂಸ್ಥೆ ನೀಡಿದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ್ದರು. ಮನೆಯಲ್ಲಿ ನಕಲಿ ಪೇಯಿಂಗ್ ಗೆಸ್ಟ್ ಎಂದು ಯುವತಿಯರನ್ನು ಇರಿಸಲಾಗಿತ್ತು. ಸ್ಥಳೀಯರು ಈ ಕುರಿತು ಅನುಮಾನ ವ್ಯಕ್ತಪಡಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

