ಪಶ್ಚಿಮ ಬಂಗಾಳದಲ್ಲಿ ಇತ್ತೀಚಿಗೆ ಸಂಭವಿಸಿದ ಪ್ರವಾಹದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ 15 ದಿನಗಳ ಮರಿ ಆನೆಯನ್ನು ಭಾರತೀಯ ಅರಣ್ಯ ಸೇವೆ ಅಧಿಕಾರಿಗಳು ರಕ್ಷಣೆ ಮಾಡಿದ್ದು, ಸದ್ಯ ಇದರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ ಪರ್ವೀನ್ ಕಸ್ವಾನ್ ಹಂಚಿಕೊಂಡ 29 ಸೆಕೆಂಡುಗಳ ಕ್ಲಿಪ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಪ್ರವಾಹದಲ್ಲಿ ಮರಿಯಾನೆ ಸಿಲುಕಿಕೊಂಡಿತ್ತು.ಇದನ್ನೂ ಗಮನಿಸಿದ ಅರಣ್ಯಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಮರಿ ಆನೆಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news

