ಸೋಲೂರು ಹೋಬಳಿಯನ್ನು ಮಾಗಡಿ ತಾಲ್ಲೂಕಿನಲ್ಲಿಯೇ ಉಳಿಸಿಕೊಳ್ಳಲು ಆರಂಭದಲ್ಲಿಯೇ ನಾನು ಎತ್ತಿದ ಧ್ವನಿಗೆ ಯಾರಿಂದಲೂ ಸೂಕ್ತ ಸ್ಪಂದನೆ ಸಿಗಲಿಲ್ಲ. ಈಗ ಸೋಲೂರು ಬೇಕು ಎಂದು ಪ್ರತಿಭಟನೆ ಮಾಡಿ ಏನು ಪ್ರಯೋಜನ? ರೈಲು ಹೋದ ಮೇಲೆ ಟಿಕೆಟ್ ಕೊಂಡಂತೆ ಆಗಿದೆ ನಿಮ್ಮ ಸ್ಥಿತಿ’ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಅಸಹಾಯಕತೆ ವ್ಯಕ್ತಪಡಿಸಿದರು.ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಕಂಡು ಸೋಲೂರನ್ನು ಮಾಗಡಿ ತಾಲ್ಲೂಕಿನಲ್ಲಿಯೇ ಉಳಿಸಿಕೊಡುವಂತೆ ಮನವಿ ಮಾಡಿದ್ದೆ. ಜನರು ಬೆಂಬಲಿಸಲಿಲ್ಲ. ಬದಲಾಗಿ ಅಸಹಕಾರ ತೋರಿದರು. ಈ ವಿಚಾರದಲ್ಲಿ ತಲೆ ಹಾಕದಂತೆ ಕೆಲವರು ನೇರವಾಗಿ ಹೇಳಿದರು. ಹಾಗಾಗಿ ನಾನು ತಟಸ್ಥನಾದೆ’ ಎಂದರು.ಜನಗಳ ತೀರ್ಮಾನ ನೋಡಿ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡೋಣ ಎಂದು ಬಾಲಕೃಷ್ಣ ಭರವಸೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

