Breaking News

ಕೋಲಾರದಲ್ಲಿ ‘ಜಾತಿ ಗಣತಿ’ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆ.!

ಕೋಲಾರದಲ್ಲಿ ಜಾತಿ ಗಣತಿ ಸಮೀಕ್ಷೆಗೆ ತೆರಳಿ ನಾಪತ್ತೆಯಾಗಿದ್ದ ಶಿಕ್ಷಕಿ ಶವವಾಗಿ ಪತ್ತೆಯಾಗಿದ್ದಾರೆ.ಕೋಲಾರ ತಾಲೂಕಿನ ಬಿ ಹೊಸಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಅಖ್ತರ್ ಬೇಗಂ ಕೋಲಾರದ ಮಹಾಲಕ್ಷ್ಮಿ ಬಡಾವಣೆಯ ನಿವಾಸಿಯಾಗಿದ್ದರು.ನರಸಾಪುರದಲ್ಲಿ ಸಮೀಕ್ಷೆ ಕಾರ್ಯ ನಡೆಸಿದ ಬಳಿಕ ನಾಪತ್ತೆಯಾಗಿದ್ದರು.2 ದಿನಗಳಿಂದ ನಾಪತ್ತೆಯಾಗಿದ್ದ ಶಿಕ್ಷಕಿ ಸುಳಿವೇ ಇರಲಿಲ್ಲ. ಈ ಸಂಬಂಧ ಕೋಲಾರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ಕೂಡ ದಾಖಲಾಗಿತ್ತು. ಆದರೀಗ ಅವರ ಶವ ಪತ್ತೆಯಾಗಿದೆ. ಕೆಜಿಎಫ್ ತಾಲೂಕಿನ ಐಪಲ್ಲಿ ಕೆರೆಯಲ್ಲಿ ಅಖ್ತರ್ ಶವ ಪತ್ತೆಯಾಗಿದೆ. ಶಿಕ್ಷಕಿಯನ್ನು ಯಾರಾದರೂ ಕೊಲೆ ಮಾಡಿದ್ರಾ ಅವರೇ ಆತ್ಮಹತ್ಯೆ ಮಾಡಿಕೊಂಡರಾ ಎಂಬುದು ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ.

Share News

About bigtvnews22

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *