Breaking News

ಯುವಕ ನಾಪತ್ತೆ; ದೂರು ದಾಖಲು

ಕುಂಜತ್ತೂರು ಪದವಿನಲ್ಲಿ ಕಾರ್ಯಾಚರಿಸುತ್ತಿರುವ ಕಾರ್ಖಾನೆಯೊಂದರ ನೌಕರ ಉತ್ತರಪ್ರದೇಶ ನಿವಾಸಿ ರೋಹಿತ್‌ ಕುಮಾರ್‌(26) ನಾಪತ್ತೆಯಾದ ಬಗ್ಗೆ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ. ಮೂರು ತಿಂಗಳ ಹಿಂದೆ ಕುಂಜತ್ತೂರಿಗೆ ಬಂದು ಕೆಲಸಕ್ಕೆ ಸೇರ್ಪಡೆಗೊಂಡಿದ್ದರು.ಕಂಪೆನಿ ಅಧೀನದಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಅವರು ವಾಸವಾಗಿದ್ದರು. ಅ.10ರಂದು ಬೆಳಗ್ಗೆ 7.30ರ ವೇಳೆ ಮನೆಯಿಂದ ಹೋದ ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ಮಾಲಿಕ ಅಬ್ದುಲ್‌ ರಹಿಮಾನ್‌ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Share News

About bigtvnews22

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *