Breaking News

ರಕ್ಷಣೆ ಕೇಳಿ ಬಂದ ಯುವತಿಯ ದೂರು ಆಲಿಸದ ಪೊಲೀಸ್‌, ಹುಡುಗಿಯ ಕತ್ತು ಕುಯ್ದು ಎಸ್ಕೇಪ್‌ ಆದ ಪಾಪಿ!

ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಭಗ್ನ ಪ್ರೇಮಿಯೊಬ್ಬನಿಂದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಬರ್ಬರವಾಗಿ ಕೊಲೆಯಾದ ಹೃದಯ ವಿದ್ರಾವಕ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಮಲ್ಲೇಶ್ವರಂನ ಮಂತ್ರಿ ಮಾಲ್ ಹಿಂಭಾಗದಲ್ಲಿರುವ ರೈಲ್ವೆ ಟ್ರ್ಯಾಕ್ ಬಳಿ ಈ ಕೃತ್ಯ ನಡೆದಿದ್ದು, ತೀವ್ರ ರಕ್ತಸ್ರಾವದಿಂದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.ಕೊಲೆಯಾದ ಯಾಮಿನಿ ಪ್ರಿಯಾ ತಂದೆ ಗೋಪಾಲ್ ಮಾಧ್ಯಮಗಳೊಂದಿಗೆ ಮಾತನಾಡಿ, ಆಘಾತಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ‘ವಿಘ್ನೇಶ್ ಕಳೆದ ಹಲವು ತಿಂಗಳಿನಿಂದ ನನ್ನ ಮಗಳಿಗೆ ಹಿಂಸೆ ಕೊಡುತ್ತಿದ್ದ. ಹಿಂದೆ ಹಿಂದೆ ಹಿಂಬಾಲಿಸಿಕೊಂಡು ಬಂದು ಪ್ರೀತಿ ಮಾಡುವಂತೆ ಒತ್ತಾಯಿಸುತ್ತಿದ್ದ. ಈ ಸಂಬಂಧ ನಾವು ಪೊಲೀಸ್ ಠಾಣೆಗೆ ಹೋಗಿ ದೂರು ಕೊಟ್ಟಿದ್ದೆವು. 6 ತಿಂಗಳ ಹಿಂದೆ ಪೊಲೀಸರು ಆತನನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆಸಿಕೊಂಡಿದ್ದರು’ ಎಂದು ಗೋಪಾಲ್ ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ಶ್ರೀರಾಂಪುರ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಪ್ರೀತಿ ನಿರಾಕರಿಸಿದ್ದ ಕಾರಣಕ್ಕೆ ಈ ಕೊಲೆ ನಡೆದಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದ್ದು, ವಿಘ್ನೇಶ್‌ಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಪೊಲೀಸರು ಕೊಲೆ ಮಾಡಿದ ದುಷ್ಕರ್ಮಿಯನ್ನು ಹಿಡಿಯಲು ತನಿಖೆಯನ್ನು ತೀವ್ರಗೊಳಿಸಿದ್ದಾರೆ

Share News

About bigtvnews22

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *