Breaking News

ದೇವಾಲಯ ಹುಂಡಿ ಹಣ ಎಣಿಸುವಾಗ ಕಳ್ಳತನಕ್ಕೆ ಯತ್ನಿಸಿದ ಮೂವರು ಅರೆಸ್ಟ್

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹುಂಡಿ ಹಣ ಎಣಿಕೆಯ ವೇಳೆ ಕಳ್ಳತನ ಮಾಡಲು ಯತ್ನಿಸಿದ ಮೂವರು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.ಮಂಡ್ಯ ನಗರದ ಶರವಣ, ಗಿರೀಶ ಮತ್ತು ಶ್ರೀನಿವಾಸ ಬಂಧಿತ ಆರೋಪಿಗಳು.ಗುರುವಾರ ನಡೆದ ಹುಂಡಿ ಹಣ ಎಣಿಕೆಯ ವೇಳೆ ಈ ಮೂವರು ಸೇರಿಕೊಂಡಿದ್ದು, ಜೇಬಿನಲ್ಲಿ ಹಣ ಹಾಕಿಕೊಂಡು ಮೂತ್ರ ವಿಸರ್ಜನೆ ನೆಪದಲ್ಲಿ ಹೊರಬಂದು ತಮ್ಮ ವಾಹನದಲ್ಲಿ ಹಣ ಇಡುತ್ತಿದ್ದಾಗ ಪೊಲೀಸರು ಬಂಧಿಸಿದ್ದಾರೆ.ಹಣ ಎಣಿಕೆ ವೇಳೆ ಈ ಮೂವರು ಹಣ ಕಳವು ಮಾಡಿದ ಬಗ್ಗೆ ಅನುಮಾನಗೊಂಡ ದೇವಾಲಯ ಸಿಬ್ಬಂದಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ. ಇವರನ್ನು ಗಮನಿಸಿದ ಪೊಲೀಸರು ಹಣದ ಸಮೇತ ಬಂಧಿಸಿದ್ದಾರೆ.

Share News

About bigtvnews22

Check Also

ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ನಕಲಿ ಔಷಧ ಮಾರಾಟದ ಕಿಂಗ್‌ಪಿನ್‌ ವೀರೇಶ್‌ಕುಮಾರ್‌

ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್‌ಕುಮಾರ್‌ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. …

Leave a Reply

Your email address will not be published. Required fields are marked *