Breaking News

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ, ಕತ್ತು ಕುಯ್ದ ಪುತ್ರ

ಮದ್ಯ ಸೇವನೆಗೆ ಹಣ ನೀಡಲಿಲ್ಲವೆಂದು ಹೆತ್ತ ತಾಯಿಯನ್ನೇ ಕೈಕಾಲು ಕಟ್ಟಿ ಹಾಕಿ, ಕತ್ತು ಕುಯ್ದು ಕೊಲೆ ಮಾಡಿದ ದಾರುಣ ಘಟನೆ ಬಾಗಲಕೋಟೆ ತಾಲೂಕಿನ ತುಳಸಿಗೇರಿ ಗ್ರಾಮದಲ್ಲಿ ನಡೆದಿದೆ. 28 ವರ್ಷದ ವೆಂಕಟೇಶ್ ಗಿರಿಸಾಗರ್ ಎಂಬಾತ ತನ್ನ 58 ವರ್ಷದ ತಾಯಿ ಶಾವಕ್ಕ ಗಿರಿಸಾಗರ್ ಕೈ ಕಾಲು ಕಟ್ಟಿ ಬಾಯಲ್ಲಿ ಬಟ್ಟೆ ತುರುಕಿ ಕುತ್ತಿಗೆ ಕೊಯ್ದು ಪರಾರಿಯಾಗಿದ್ದಾನೆ.ಮನೆಯಲ್ಲಿ ಮಗ ವೆಂಕಟೇಶ್ ಹಾಗೂ ಶಾವಕ್ಕ ವಾಸ ಮಾಡುತ್ತಿದ್ದರು. ಕಳೆದ 15 ವರ್ಷಗಳಿಂದ ತುಳಸಿಗೇರಿ ಗ್ರಾಮದಲ್ಲಿ ಒಂದು ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆದರೆ ಮಗ ವೆಂಕಟೇಶ್ ಯಾವುದೇ ಕೆಲಸ ಕಾರ್ಯ ಮಾಡದೆ ಕುಡಿತದ ದಾಸನಾಗಿದ್ದ. ತಾಯಿ ಶಾವಕ್ಕ ಕೂಲಿ ನಾಲೆ ಮಾಡಿ ಮಗನನ್ನು ಸಾಕಿ ಸಲುತ್ತಿದ್ದಳು .ಆದರೆ ವೆಂಕಟೇಶ್ ನಿತ್ಯ ಕುಡಿದು ಬಂದು ತಾಯಿ ಜೊತೆ ಮಗ ಜಗಳವಾಡುತ್ತಿದ್ದ. ಜೊತೆಗೆ ಮದ್ಯಪಾನ ಮಾಡಲು ಹಣ ಕೊಡು ಎಂದು ಪೀಡಿಸುತ್ತಿದ್ದ.ಗುರುವಾರ ಕೂಡ ಎಂದಿನಂತೆಯೇ ಕುಡಿಯಲು ಹಣ ಕೊಡು ಎಂದು ಪೀಡಿಸಿದ್ದಾನೆ. ತಾಯಿ ನಿರಾಕರಿಸಿದಾಗ, ಬಟ್ಟೆಯಿಂದ ಆಕೆಯ ಕೈ ಕಾಲು ಕಟ್ಟಿ, ಬಾಯಲ್ಲಿ ಬಟ್ಟೆ ತುರುಕಿ ಕತ್ತು ಕೊಯ್ದು ಕೊಲೆ ಮಾಡಿ ಓಡಿಹೋಗಿದ್ದಾನೆ.ಸಂಜೆಯಾದರೂ ಕೂಡ ಶಾವಕ್ಕ ಕಾಣಿಸದೆ ಇದ್ದಾಗ ಅಕ್ಕಪಕ್ಕದವರು ಮನೆ ಬಾಗಿಲು ಸಂಧಿಯಲ್ಲಿ ಇಣುಕಿ ನೋಡಿದ್ದಾರೆ‌. ಆಗ ರಕ್ತದ ಮಡುವಿನಲ್ಲಿ ಸಾವಕ್ಕ ಶವವಾಗಿ ಬಿದ್ದಿದ್ದಳು. ತಕ್ಷಣ ಸ್ಥಳೀಯರು ಕಲಾದಗಿ ಪೊಲೀಸರಿಗೆ ಸುದ್ದಿ ತಿಳಿಸಿದ್ದಾರೆ. ಸ್ಥಳಕ್ಕೆ ಕಲಾದಗಿ ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಕೊಲೆ ಮಾಡಿರುವುದು ಗೊತ್ತಾಗಿದೆ. ತಾಯಿಯನ್ನು ಕೊಂದಂತಹ ಪಾಪಿ ಮಗ ಗದ್ದನಕೇರಿ ಕ್ರಾಸ್​ನ ಒಂದು ಬಾರ್​ನಲ್ಲಿ ಕುಡಿಯುತ್ತಾ ಕೂತಿದ್ದ‌. ಸದ್ಯ ಕಲಾದಗಿ ಪೊಲೀಸರು ದುಷ್ಟ ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Share News

About bigtvnews22

Check Also

ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ನಕಲಿ ಔಷಧ ಮಾರಾಟದ ಕಿಂಗ್‌ಪಿನ್‌ ವೀರೇಶ್‌ಕುಮಾರ್‌

ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್‌ಕುಮಾರ್‌ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. …

Leave a Reply

Your email address will not be published. Required fields are marked *