Breaking News

ಹಾವೇರಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ – ಮೂವರ ಸಾವು, 21 ಕ್ಕೂ ಹೆಚ್ಚು ಜನರಿಗೆ ಗಾಯ:

ಹಾವೇರಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಟಾಟಾ ಏಸ್ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವನ್ನೋಪ್ಪಿದ್ದು, 21 ಕ್ಕೂ ಹೆಚ್ಚು ಮಂದಿ ಗಾಯವಾಗಿದೆ. ಮೆಕ್ಕೆಜೋಳ ತುಂಬಿಕೊಂಡು ಹೊರಟಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ದುರಂತವಾಗಿದೆ.
ಮೃತರು ಮಲೆಬೆನ್ನೂರು ಗ್ರಾಮದ ನಿಂಗಮ್ಮ, ಚಮಾನ್ ಸಾಬ್, ಮತ್ತು ಮಹಿಬೂಬು ಸಾಬ್ ಎಂದು ಗುರುತಿಸಲಾಗಿದೆ. ವೆಂಕಟಾಪುರಕ್ಕೆ ಹಬ್ಬದ ಊಟಕ್ಕೆ ತೆರಳಿದ್ದ ಕುಟುಂಬ, ವಾಪಸು ಬರುವಾಗ ಅಪಘಾತ ಸಂಭವಿಸಿದೆ.
ಗಾಯಾಳಿಗಳಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *