ಬಡಗಲಪುರ ಗ್ರಾಮದ ರೈತ ಮಹದೇವಾ ಎಂಬ ವ್ಯಕ್ತಿಗೆ ಹುಲಿ ದಾಳಿ ನಡೆಸಿದೆ. ಜಮೀನಿನಲ್ಲಿ ಹತ್ತಿ ಬೆಳೆ ಬಿಡಿಸುತ್ತಿದ್ದ ವೇಳೆ ಹುಲಿ ರೈತನ ಮೇಲೆ ದಾಳಿ ನಡೆಸಿದ್ದು, ರೈತನಿಗೆ ಗಂಭೀರ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದಿದೆ.ಕೊಂಬಿಂಗ್ ನಡೆಸುತ್ತಿದ್ದ ಅಣತಿ ದೂರದಲ್ಲೇ ಹುಲಿ ದಾಳಿ ನಡೆಸಿದೆ. ರೊಚ್ಚಿಗೆದ್ದ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳ ವಾಹನಕ್ಕೆ ಕಲ್ಲು ತೂರಾಟ ಮಾಡಿ ಜಖಂಗೊಳಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

