Breaking News

ಮೊಬೈಲ್‌ ಸ್ಫೋಟ: ಯುವಕನಿಗೆ ಗಂಭೀರ ಗಾಯ!

ಮೊಬೈಲ್‌ ಸ್ಫೋಟದಿಂದಾಗಿ ಗಂಭೀರ ಗಾಯಗೊಂಡಿದ್ದ ನಗರದ 19 ವರ್ಷದ ಯುವಕನನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿ ಸ್ಪರ್ಶ್‌ ಆಸ್ಪತ್ರೆ ವೈದ್ಯರು ಯಶಸ್ವಿಯಾಗಿದ್ದಾರೆ.ಮೊಬೈಲ್ ಸ್ಫೋಟದಿಂದ ಸುಟ್ಟ ಗಾಯಗಳ ಜತೆಗೆ ಶ್ವಾಸಕೋಶಕ್ಕೂ ತೀವ್ರ ತರದ ಹಾನಿಯಾಗಿತ್ತು. ಮಧುಮೇಹದಿಂದಾಗಿ ಚಯಾಪಚಯ ಪ್ರಕ್ರಿಯೆಗೆ ತೊಂದರೆ ಉಂಟಾಗಿತ್ತು. ಮಧುಮೇಹ ಇರುವುದರಿಂದ ದೇಹದ ಅಂಗಾಂಗಗಳ ಮೇಲೆ ತೀವ್ರ ಪರಿಣಾಮ ಬೀರಿರುವುದನ್ನು ಮೊದಲೇ ಖಚಿತಪಡಿಸಿಕೊಂಡು, ಸೂಕ್ತ ಚಿಕಿತ್ಸಾ ಕ್ರಮ ಅನುಸರಿಸಲಾಯಿತು. ಇದರಿಂದ ಬಹುಅಂಗಾಂಗ ವೈಫಲ್ಯ ತಪ್ಪಿಸಲು ಸಾಧ್ಯವಾಯಿತು’ ಎಂದು ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ. ಹೇಮಂತ್‌ ಎಚ್‌.ಆರ್‌. ವಿವರಿಸಿದರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *