Breaking News
Featured Video Play Icon

ಬ್ರೇಕಿಂಗ್ : ಆರ್.ಎಸ್.ಎಸ್ ಕಚೇರಿ ಮುತ್ತಿಗೆಗೆ ಯತ್ನ – ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು!!

ಹುಬ್ಬಳ್ಳಿ: ಸಚಿವ ಪ್ರಿಯಾಂಗ್ ಖರ್ಗೆ ಬೆದರಿಕೆ ಹಿನ್ನೆಲೆ ಆ‌ರ್ ಎಸ್ ಎಸ್ ಕಚೇರಿ ಎದುರು ಪ್ರತಿಭಟನೆಗೆ ಯತ್ನಿಸದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಹುಬ್ಬಳ್ಳಿಯ ಕೇಶವಕುಂಜದ ಎದುರು ಕಾಂಗ್ರೆಸ್‌ ಪ್ರತಿಭಟನೆಗೆ ಯತ್ನಿಸಿದ್ದು, ಹುಬ್ಬಳ್ಳಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲು ಮುಂದಾಗಿದ್ದು, ನಗರದ ಗೋಕುಲ ರಸ್ತೆಯಲ್ಲಿ ಪ್ರತಿಭಟನೆಗಿಳಿದ

ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ಮಾರ್ಗ ಮಧ್ಯದಲ್ಲೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.50ಕ್ಕೂ ಹೆಚ್ಚಿನ ಪೊಲೀಸರನ್ನ ನಿಯೋಜನೆ ಮಾಡಿದ್ದು, ದೇಶ ದ್ರೋಹಿ ಆರ್ ಎಸ್ ಎಸ್ ಎಂದು ಘೋಷಣೆ ಕೂಗಿದ್ದು, ಬ್ಯಾರಿಕೆಡ್ ಮೂಲಕ ರಸ್ತೆ ಬಂದ್ ಮಾಡಿರೋ ಪೊಲೀಸರನ್ನು ನೂಕಿ ಆರ್ ಎಸ್ ಎಸ್ ಕಚೇರಿಗೆ ತೆರಳಲು ಮುಂದಾಗಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನ್ಯೂ ಸಿ ಎ ಆರ್ ಗೌಂಡ್ ಗೆ ರವಾನೆ ಮಾಡಲಾಗಿದೆ.

Share News

About Shaikh BigTv

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *