Breaking News

ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರು ಟ್ರಾಫಿಕ್ ಪೊಲೀಸ್ ಸಸ್ಪೆಂಡ್…

ಚಾಲಕನ ಜೊತೆ ಟ್ರಾಫಿಕ್ ಪೊಲೀಸರ ಗೂಂಡಾ ವರ್ತನೆ

ಆಟೋ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಇಬ್ಬರು ಟ್ರಾಫಿಕ್ ಪೊಲೀಸರನ್ನು ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.ನಿನ್ನೆ ಸಂಜೆ ಆಟೋ ಚಾಲಕ ಬಶೀರ್ ಎಂಬವರು ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬಂದಿದ್ದಾರೆ. ಈ ವೇಳೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್‌ ಠಾಣಾ ಎಎಸ್‌ಐ ಚಿದಾನಂದ ರೈ, ಮತ್ತು ,ಸಿಪಿಸಿ ಶ್ರೀ ಶೈಲ ಎಂ ಕೆ ಎಂಬುವರು ಆಟೋವನ್ನು ನಿಲ್ಲಿಸಲು ಸೂಚಿಸಿದ್ದಾರೆ. ಆದರೆ..

ಆಟೋ ಚಾಲಕ ಗಾಡಿ ನಿಲ್ಲಿಸದೆ ವೇಗವಾಗಿ ಹೋಗಿದ್ದಾನೆ. ಈ ವೇಳೆ ವಾಹನವನ್ನು ಹಿಂಬಾಲಿಸಿದ ಇಬ್ಬರು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ವಾಹನ ನಿಲ್ಲಿಸಿ ಆಟೋ ಡ್ರೈವರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್‌ ಆಗಿತ್ತು. ಇದೀಗ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ ಶ್ರೀ ಶೈಲ ಎಂ ಕೆ ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಎಸ್ಪಿಅರುಣ್ ಕುಮಾರ್ ತಿಳಿಸಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *