Breaking News

ಪುತ್ತೂರು – ಆಟೋಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರು ಟ್ರಾಫಿಕ್ ಪೊಲೀಸ್ ಸಸ್ಪೆಂಡ್.

ಆಟೋ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಇಬ್ಬರು ಟ್ರಾಫಿಕ್ ಪೊಲೀಸರನ್ನು ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.ಆಟೋ ಚಾಲಕ ಗಾಡಿ ನಿಲ್ಲಿಸದೆ ವೇಗವಾಗಿ ಹೋಗಿದ್ದಾನೆ. ಈ ವೇಳೆ ವಾಹನವನ್ನು ಹಿಂಬಾಲಿಸಿದ ಇಬ್ಬರು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ವಾಹನ ನಿಲ್ಲಿಸಿ ಆಟೋ ಡ್ರೈವರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್‌ ಆಗಿತ್ತು. ಇದೀಗ ಚಿದಾನಂದ ರೈ, ಎ.ಎಸ್.ಐ ಮತ್ತು ಸಿಪಿಸಿ ಶ್ರೀ ಶೈಲ ಎಂ ಕೆ ರವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಎಸ್ಪಿಅರುಣ್ ಕುಮಾರ್ ತಿಳಿಸಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *