ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಚಾಲಕ, ನಿರ್ವಾಹಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಬಳಿಯ ವಡ್ಡಿ ಘಾಟ್‌ನಲ್ಲಿ ನಡೆದಿದೆ.ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಾದರೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಅಂಕೋಲಾ ಠಾಣಾ ಪೊಲೀಸರು ತಕ್ಷಣ ಆಗಮಿಸಿ, ಗಾಯಾಳುಗಳನ್ನು ಅಂಕೋಲಾ ಹಾಗೂ ಕುಮಟಾ ಸರಕಾರಿ ಆಸ್ಪತ್ರೆಗಳಿಗೆ ರವಾನಿಸಿದರು. ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆ ನೀಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

