ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಯಾವುದೇ ಸಂಘಸಂಸ್ಥೆಗಳ ಚಟುವಟಿಕೆಗಳನ್ನು ಜನರಿಗೆ ತೊಂದರೆಯಾಗುವಂತೆ ಸಾರ್ವಜನಿಕ ಸ್ಥಳಗಳಲ್ಲಿ ನಡೆಸಲು ಅನುಮತಿ ಪಡೆಯುವಂತೆ ಆದೇಶ ನೀಡಲಾಗಿದ್ದು, ಇದರಲ್ಲಿ ಯಾವುದೇ ಸಂಘಸಂಸ್ಥೆಗಳನ್ನು ಗುರಿಯಾಗಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದು ಮೆಚ್ಚುಗೆ ಸೂಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

