Breaking News

ಕಚೇರಿ ಸೂಚನೆ ಮೇರೆಗೆ ಪೊಲೀಸ್ ಅಧಿಕಾರಿ, ಸಿಬ್ಬಂದಿ ಅಮಾನತು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕುರಿಯ ಗ್ರಾಮದಲ್ಲಿ ಆಟೋ ಚಾಲಕರೊಬ್ಬರು ಸಮವಸ್ತ್ರ ಧರಿಸದೆ ಆಟೋ ಚಾಲನೆ ಮಾಡಿದ ಕಾರಣ ಸಂಚಾರಿ ಪೊಲೀಸರು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು.ಈ ವಿಚಾರ ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗದ ಗಮನಕ್ಕೆ ಬಂದಿದ್ದು, ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು.ಜನಸ್ನೇಹಿ ಆಡಳಿತ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಅದರಂತೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಕರ್ತವ್ಯದಿಂದ ಅಮಾನತುಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಕ್ರಮ ಕೈಗೊಂಡಿರುತ್ತಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *