Breaking News

ಮಹಿಳೆಯ ಬೆರಳು ಕತ್ತರಿಸಿ ಚಿನ್ನಾಭರಣ ದರೋಡೆ ಮಾಡಿದ್ದ ಇಬ್ಬರ ಬಂಧನ

ಆರ್ಕೆಸ್ಟ್ರಾ ನೋಡಿಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿ, ಲಾಂಗ್‌ನಿಂದ ಹಲ್ಲೆ ಮಾಡಿ, ಸರಗಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಖದೀಮರನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.ಯೋಗಾನಂದ (35) ಹಾಗೂ ಈತನ ಸಹಚರ ಪ್ರವೀಣ್ ಬಂಧಿತರು.ದೂರುದಾರ ಮಹಿಳೆ ಉಷಾ ಹಾಗೂ ಸ್ನೇಹಿತೆ ವರಲಕ್ಷ್ಮೀ ಎಂಬವರು ಗಣೇಶ ಹಬ್ಬದ ಆರ್ಕೆಸ್ಟ್ರಾ ಮುಗಿಸಿ ಮನೆಗೆ ವಾಪಸ್ ಆಗುವಾಗ ಪಲ್ಸರ್ ಬೈಕ್​ನಲ್ಲಿ ಬಂದ ದುರುಳರು ಮಚ್ಚು ತೋರಿಸಿದ್ಧಾರೆ. ಗಾಬರಿಗೊಂಡ ಉಷಾ ಸರ ನೀಡಿದರೆ, ವರಲಕ್ಷ್ಮಿ ಅವರು ಪ್ರತಿರೋಧ ತೋರಿಸಿದ್ದು ಮಚ್ಚಿನಿಂದ ಹಲ್ಲೆ ಮಾಡಿದ್ದರು. ಈ ವೇಳೆ ಅವರ, ಕೈ ಬೆರಳು ತುಂಡಾಗಿತ್ತು.ಅದೇ ದಿನ ಕುಮಾರಸ್ವಾಮಿ ಲೇಔಟ್ ಹಾಗೂ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ಸರಗಳ್ಳತನ ಮಾಡಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ಪುಂಡರ ಹಾವಳಿ: ಗಾಂಜಾ ಮತ್ತಿನಲ್ಲಿ ಡೆಲಿವರಿ ಬಾಯ್ ಮೇಲೆ ಹಲ್ಲೆ!

ಬೆಂಗಳೂರು: ಯಲಹಂಕದ ಅಟ್ಟೂರು ಲೇಔಟ್‌ನಲ್ಲಿ ಡೆಲಿವರಿ ಬಾಯ್‌ ಮೇಲೆ ಆರೇಳು ಮಂದಿ ಯುವಕರ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. …

Leave a Reply

Your email address will not be published. Required fields are marked *