Breaking News

ಅಟೋ ಚಾಲಕ ಸಾವು; ಪತ್ನಿಯಿಂದ ದೂರು

ಸುಳ್ಯದಲ್ಲಿ ಅಟೋ ರಿಕ್ಷಾ ಚಾಲಕರೋರ್ವರು ಮೃತರಾಗಿದ್ದು, ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ ಅವರ ಪತ್ನಿ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ.ಸುಳ್ಯ ಶಾಂತಿನಗರದ ಬೆಟ್ಟಂಪಾಡಿ ನಿವಾಸಿ ಅಟೋ ಚಾಲಕ ಜಬ್ಬಾರ್ (35) ಅವರು ಅ. 17ರ ರಾತ್ರಿ ನಿಧನ ಹೊಂದಿದ್ದರು.ಅವರು ಕೆಲವು ತಿಂಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆದು, ಗುಣಮುಖರಾಗಿದ್ದು, ಮತ್ತೆ ಅಟೋ ಚಾಲನೆ ಕೆಲಸ ಮಾಡುತ್ತಿದ್ದರು.ಜಬ್ಬಾರ್ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿರುವ ಪತ್ನಿಯು, ವ್ಯಕ್ತಿಯೋರ್ವರು ಹಲ್ಲೆ ನಡೆಸಿದ್ದರಿಂದ ತನ್ನ ಪತಿ ಸಾವನ್ನಪ್ಪಿದ್ದಾರೆ ಎಂದು ಸುಳ್ಯ ಠಾಣೆಗೆ ದೂರು ನೀಡಿದ್ದಾರೆ. ಹಲ್ಲೆ ನಡೆಸಿದ್ದಾರೆ ಎನ್ನಲಾದ ರಫೀಕ್ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯಲ್ಲಿ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ‌.ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *