ಕಾರ್ಕಳದ ಯುವಕ ಅಭಿಷೇಕ ಆತ್ಮಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪ್ರಕರಣದ ತನಿಖೆ ಕುರಿತಂತೆ ಉಡುಪಿ ಎಸ್ಪಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದು ಕಾರ್ಕಳ ಅಭಿಷೇಕ ಆತ್ಮಹತ್ಯೆ ಪ್ರಕರಣದಲ್ಲಿ ಹನಿಟ್ರ್ಯಾಪ್ ಬಗ್ಗೆ ಯಾವುದೇ ಸಾಕ್ಷಿ ಇಲ್ಲ – ಯುವತಿ ಅಶ್ಲೀಲ ವಿಡಿಯೋ ವಾಟ್ಸಾಪ್ ಗ್ರೂಪ್‌ಗೆ ಹಾಕಿದ್ದೆ ಅಭಿಷೇಕ್ ಎಂದು ತಿಳಿಸಿದ್ದಾರೆ.ಆರೋಪಿ ಯುವತಿಯ ಮೊಬೈಲ್‌ನಲ್ಲಿ ಯಾವುದೇ ರೀತಿಯ ಅಶ್ಲೀಲ ಫೋಟೋ ಅಥವಾ ವಿಡಿಯೋಗಳು ಸಿಕ್ಕಿಲ್ಲ ಮತ್ತು ಆಕೆ ಯಾವುದೇ ವಿಡಿಯೋವನ್ನು ಯಾರಿಗೂ ಕಳುಹಿಸಿರುವುದಿಲ್ಲ ಎಂಬುದು ತನಿಖೆಯಿಂದ ಗೊತ್ತಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಅಭಿಷೇಕ್ ಯುವತಿಗೆ ಕಳುಹಿಸಿದ್ದ ಹಣವನ್ನು ಅವಳು ಅದೇ ದಿನ ವಾಪಾಸ್ಸು ಕೊಟ್ಟಿರುವುದು ಕಂಡು ಬಂದಿದೆ’ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

