Breaking News

ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕ್ರೂಸರ್ – 15 ಮಂದಿ ಪ್ರಯಾಣಿಕರು ಪಾರು!

ಚಾಲಕನ ನಿಯಂತ್ರಣ ತಪ್ಪಿ ಕ್ರೂಜರ್ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಕ್ರೂಜರ್ ನಲ್ಲಿದ್ದ 15 ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಕೊಂಡಿಕೊಪ್ಪದಿಂದ ಹುಲಿಜಂತಿ ಮಾಳಿಂಗರಾಯ ಜಾತ್ರೆಗೆ ಕ್ರೂಜರ್ ವಾಹನದಲ್ಲಿ ಜನರು ಹೊರಟಿದ್ದರು.ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಹತ್ತಿದ ಕ್ಯೂಜರ್ ಪಲ್ಟಿಯಾಗಿದೆ.

ಅಪಘಾತದ ತೀವ್ರತೆಗೆ ಕ್ರೂಜರ್ ನ ಮುಂಭಾಗ ನಜ್ಜು ಗುಜ್ಜಾಗಿದೆ.ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಆಗಿಲ್ಲ.ಚಾಲಕ ಸೇರಿ ಏಳೆಂಟು ಜನ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯವಾಗಿದೆ. ಗಾಯಾಳುಗಳು ಇಳಕಲ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಇಳಕಲ್ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *