ನಾಡಿನಾದ್ಯಂತ ಇಂದು ದೀಪಾವಳಿ ಹಬ್ಬದ ಸಡಗರ, ಸಂಭ್ರಮ ಮನೆಮಾಡಿರುವಂತೆಯೇ ನಗರದ ಪ್ರತಿಷ್ಠಿತ ಮಾಲ್ ಗಳಲ್ಲಿ ಒಂದಾದ ಮಾಗಡಿ ರಸ್ತೆಯ ಜಿಟಿ ಮಾಲ್ ನಿಂದ ಬಿದ್ದು ಯುವಕನೋರ್ವ ಮೃತಪಟ್ಟಿದ್ದಾನೆ.GTವರ್ಲ್ಡ್ ಮಾಲ್ ನ ಮೂರನೇ ಅಂತಸ್ಥಿನಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ.ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಮಾಗಡಿ ರಸ್ತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಯುವಕ ಆಯತಪ್ಪಿ ಬಿದ್ದಿರುವುದೋ ಅಥವಾ ಆತ್ಮಹತ್ಯೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

