Breaking News

ಸಮೀಕ್ಷೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಕ ಸಾವು

ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕಾರ್ಯದ ವೇಳೆ ಪ್ರಜ್ಞೆ ತಪ್ಪಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಕ ಶರಣಪ್ಪ ಯಮನಪ್ಪ ಚಲವಾದಿ ಶನಿವಾರ ಮೃತಪಟ್ಟಿದ್ದಾರೆ.ಅಕ್ಟೋಬರ್ 9ರಂದು ಸಮೀಕ್ಷಾ ಕಾರ್ಯದ ವೇಳೆ ಪ್ರಜ್ಞೆ ತಪ್ಪಿ ಬಿದ್ದಿದ್ದ ಅವರನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆ ದಾಖಲಿಸಲಾಗಿದ್ದು. ರಕ್ತದೊತ್ತಡ ಕಡಿಮೆಯಾಗಿ ಮೃತಪಟ್ಟಿದ್ದಾರೆ.

ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ. ಮೃತರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ನೀಡುವಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಒತ್ತಾಯಿಸಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *