Breaking News

ಶಂಕರನಾರಾಯಣ: ವ್ಯಕ್ತಿ ಆತ್ಮಹತ್ಯೆ

ಶಂಕರನಾರಾಯಣ ಗ್ರಾಮದ ಸುಬ್ಬ ಕುಲಾಲ (64) ಅವರು ಮನೆಯ ಸಮೀಪದ ಹಾಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೃಷಿಕರಾಗಿದ್ದ ಅವರು ಕೈ, ಕಾಲು ನಡುಗುವ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಮಾಡಿದರೂ ಗುಣವಾಗಿರಲಿಲ್ಲ. ಅ. 18ರಂದು ಆಸ್ಪತ್ರೆಗೆಂದು ಹೋದವರು ಮರಳಿ ಮನೆಗೆ ಬಂದಿರಲಿಲ್ಲ.ಅ. 19ರಂದು ಮನೆಯ ಸಮೀಪದ ಹಾಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.ಕಾಯಿಲೆ ಗುಣವಾಗದ ಹಿನ್ನೆಲೆಯಲ್ಲಿ ಜೀವನದಲ್ಲಿ ಜುಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪುತ್ರ ಕರುಣಾಕರ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *