Breaking News

ಗ್ರಾಂ ಪಂಚಾಯತಿ ಬಿಲ್ ಕಲೆಕ್ಟರ್ ಮೇಲೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ!

ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ತಟ್ಟೆಕೆರೆ ಗ್ರಾಮದಲ್ಲಿ ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ವೀರಭದ್ರ ಸ್ವಾಮಿ ಮೇಲೆ ಹಲ್ಲೆ ನಡೆಸಲಾಗಿದೆ.ಎಡಗೈ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಭೀಕರವಾಗಿ ಹಲ್ಲೆ ನಡೆಸಲಾಗಿದೆ.ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಪಿ ಸುರೇಶ್ ಹಾಗೂ ಶಿವಕುಮಾರ್ ಎಂಬುವರ ವಿರುದ್ಧ ಹಲ್ಲೆ ಆರೋಪ ಕೇಳಿ ಬಂದಿದೆ. ಚಾಕುವಿನಿಂದ ಇರದ ಕೂಡಲೇ ವೀರಭದ್ರ ಸ್ವಾಮಿ ತಪ್ಪಿಸಿಕೊಂಡಿದ್ದಾನೆ. ಓಡಿ ಹೋಗಿ ಪ್ರಾಣ ಉಳಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ದಾಬಸ್ ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ನಂತರ ತುಮಕೂರು ಆಸ್ಪತ್ರೆಗೆ ವೀರಭದ್ರ ಸ್ವಾಮಿಯನ್ನು ಶಿಫ್ಟ್ ಮಾಡಲಾಗಿದೆ. ಹಳೆಯ ವೈಷ್ಣವ ಹಿನ್ನೆಲೆಯಲ್ಲಿ ವೀರಭದ್ರ ಸ್ವಾಮಿ ಮೇಲೆ ಹಲ್ಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *