ಡಿ ಕೆ ಶಿವುಕುಮಾರ್ ದೀಪಾವಳಿಯ ಬಲಿಪಾಡ್ಯಮಿ ದಿನ ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನವನ್ನು ಪತ್ನಿ ಜೊತೆಗೂಡಿ ಪಡೆದಿದ್ದಾರೆ. ರಾಯರ ಅನುಗ್ರಹಕ್ಕಾಗಿ ತುಲಾಭಾರ ನೆರವೇರಿಸಿದರು. ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಬಳಿಕ ಪಂಚಮುಖಿ ದೇಗುಲದಲ್ಲಿ ಪೂಜೆ ಸಲ್ಲಿಸಿ, ಮೂಲ ರಾಮ ದೇವರ ದರ್ಶನವನ್ನೂ ಮಾಡಿದ್ದಾರೆ.ಶ್ರೀಗಳ ಭೇಟಿ ಬಳಿಕ ಮಾತನಾಡಿದ ಅವರು, ಶ್ರೀಮಠದಿಂದ ಮಂತ್ರಾಲಯಕ್ಕೆ ಬರಲು ಆಹ್ವಾನವಿತ್ತು. ರಾಯರ ಅನುಗ್ರಹಕ್ಕಾಗಿ ಬಹಳ ದಿನಗಳಿಂದ ಬರಬೇಕೆಂದು ಇದ್ದೆ. ಗುರುಗಳ ಅನುಗ್ರಹ ಎಲ್ಲಕ್ಕೂ ಅವಶ್ಯಕ. ಇಂದು ವಿಶೇಷ ದಿನವಾಗಿದ್ದು, ಶ್ರೀಮಠದ ಭೂಮಿ ಪೂಜೆ ಕಾರ್ಯಕ್ರಮದಲ್ಲೂ ಭಾಗಿಯಾದೆ. ಕಳೆದ ಬಾರಿ ಸಂಕಲ್ಪ ಮಾಡಿದ್ದಕ್ಕೆ ನಮ್ಮ ಸರ್ಕಾರ ಬಂದಿದೆ. ಎಲ್ಲರಿಗೆ, ನಾಡಿಗೆ ಒಳ್ಳೆಯದಾಗಲಿ ಅಂತ ಬೇಡಿಕೊಂಡಿದ್ದೇನೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

