ಹಾವೇರಿಯ ಗುರು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಕಳ್ಳತನ ನಡೆದಿದೆ.ಮಠದ ಕೊಠಡಿಗಳ ಬೀಗ ಮುರಿದು ಚಿನ್ನಾಭರಣ, ಪೂಜಾ ಸಾಮಾಗ್ರಿಗಳನ್ನು ಕಳ್ಳತನ ಮಾಡಲಾಗಿದೆ. ಸರಿಸುಮಾರು 10 ಲಕ್ಷ ಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಆರಂಭಗೊಂಡಿದೆ.ಕಳ್ಳರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಭಕ್ತರು ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

