ನಿರಂತರ ಮಳೆಗೆ ಬೆಳೆಗಳು ನೀರು ಪಾಲಾದರೆ, ಜನಜೀವನ ಅಸ್ತವ್ಯಸ್ತವಾಗಿದೆ. ಇತ್ತ ಸಿಲಿಕಾನ್ ಸಿಟಿಯಲ್ಲೂ ಮಳೆ ಅಬ್ಬರಿಸಿದೆ. ನಗರದಲ್ಲಿ ಕಳೆದ ರಾತ್ರಿ ಭಾರೀ ಮಳೆ ಸುರಿದಿದೆ.ಪರಿಣಾಮ ಕೆಲವು ಅವಾಂತರಗಳು ಸಂಭವಿಸಿವೆ. ಏಕಾಏಕಿ ಬೃಹತ್ ಮರದ ಕೊಂಬೆ ರಸ್ತೆಗೆ ಉರುಳಿ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಮೂವರು ಪಾರಾಗಿದ್ದಾರೆ.ಇನ್ನು ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್ ಮಾಡಿದ್ದು, ಅಲಿ ಅಸ್ಕರ್ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ಕನ್ನಿಂಗ್‌ಹ್ಯಾಮ್ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವಾಗಿ ಇನ್‌ಫೆಂಟ್ರಿ ರಸ್ತೆಯನ್ನು ಬಳಸುವಂತೆ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

