Breaking News

ಅಕ್ರಮ ಗೋಸಾಗಾಟ: ವಾಹನ ನಿಲ್ಲಿಸದ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್, ಓರ್ವನಿಗೆ ಗಾಯ.

ಪುತ್ತೂರು ತಾಲೂಕಿನ ಈಶ್ವರಮಂಗಲದ ಬೆಳ್ಳಿಚಡವು ಎಂಬಲ್ಲಿ ಇಂದು ಮುಂಜಾನೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆಯಲು ಯತ್ನಿಸಿದಾಗ ಪೊಲೀಸರ ಮೇಲೆ ವಾಹನ ಚಲಾಯಿಸಲು ಪ್ರಯತ್ನಿಸಿದ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಗುಂಡು ಹಾರಿಸಿದ್ದು, ಓರ್ವ ಆರೋಪಿ ಗಾಯಗೊಂಡಿದ್ದಾನೆ.ಪೊಲೀಸರ ಗುಂಡೇಟಿನಿಂದ ವಾಹನದಲ್ಲಿದ್ದ ಆರೋಪಿಗಳಲ್ಲಿ ಓರ್ವನಾದ ಅಬ್ದುಲ್ಲಾ (40) ಗಾಯಗೊಂಡಿದ್ದಾನೆ. ಗಾಯಗೊಂಡ ತಕ್ಷಣವೇ ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ನಂತರ ಮತ್ತೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *