ಶಬರಿಮಲೆಯ ಅಯ್ಯಪ್ಪ ದೇಗುಲ ದರ್ಶನಕ್ಕೆ ಬಂದಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಲಿಕಾಪ್ಟರ್ ನ ಚಕ್ರಗಳು ಹೊಸದಾಗಿ ನಿರ್ಮಿಸಲಾಗಿದ್ದ ಹೆಲಿಪ್ಯಾಡ್ ನಲ್ಲಿ ಹೂತು ಹೋಗಿರುವ ಘಟನೆ ಇಲ್ಲಿನ ಪ್ರಮಾದಂನಲ್ಲಿರುವ ರಾಜೀವ್ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದಿದೆ.ಪಂಪಾಗೆ ರಸ್ತೆ ಮಾರ್ಗ ಮೂಲಕ ರಾಷ್ಟ್ರಪತಿ ತೆರಳಿದ ಬಳಿಕ, ಪೊಲೀಸರು ಹಾಗೂ ಅಗ್ನಿ ಶಾಮಕ ಸಿಬ್ಬಂದಿ ಹೆಲಿಕಾಪ್ಟರ್ ಅನ್ನು ತಳ್ಳುವ ದೃಶ್ಯಗಳು ಟಿ.ವಿ ಮಾಧ್ಯಮಗಳಲ್ಲಿ ಪ್ರಸಾರವಾದವು.
ರಾಷ್ಟ್ರಪತಿಯವರ ಹೆಲಿಕಾಪ್ಟರ್ ಲ್ಯಾಂಡ್ ಮಾಡಲು ಸ್ಟೇಡಿಯಂ ಅನ್ನು ಕೊನೆಯ ಕ್ಷಣದಲ್ಲಿ ಗೊತ್ತುಪಡಿಸಲಾಗಿತ್ತು. ಹೀಗಾಗಿ ಮಂಗಳವಾರ ಕಾಂಕ್ರಿಟ್ ಬಳಸಿ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು ಎಂದು ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

