Breaking News

ಚಿತ್ರದುರ್ಗ: ಕೋಡಿ ಬಿದ್ದ ವಿವಿ ಸಾಗರ ಜಲಾಶಯ- ಹಿನ್ನೀರು ಭಾಗದ ಮನೆಗಳಿಗೆ ನೀರು

ಹಿರಿಯೂರು ತಾಲ್ಲೂಕಿನ ವಾಣಿವಿಲಾಸ ಸಾಗರ ಜಲಾಶಯ ವರ್ಷದಲ್ಲಿ 2ನೇ ಬಾರಿಗೆ ಭರ್ತಿಯಾಗಿದ್ದು ಕೋಡಿಯಲ್ಲಿ ನೀರು ಹರಿಯುತ್ತಿದೆ. ಆದರೆ, ಹೊಸದುರ್ಗ ತಾಲ್ಲೂಕಿನ ಹಿನ್ನೀರು ಪ್ರದೇಶದ ಹಲವು ಮನೆಗಳಿಗೆ ನೀರು ನುಗ್ಗಿದ್ದು ನಿವಾಸಿಗಳು ಮನೆಯಿಂದ ಹೊರ ಬರುತ್ತಿದ್ದಾರೆ.ಜಲಾಶಯ ನಿರ್ಮಾಣವಾದ ನಂತರ 4ನೇ ಬಾರಿಗೆ ಕೋಡಿ ಬಿದ್ದಿದೆ. 1907ರಲ್ಲಿ ಜಲಾಶಯ ನಿರ್ಮಾಣಗೊಂಡ ನಂತರ 1933ರಲ್ಲಿ ಮೊದಲ ಬಾರಿಗೆ ಭರ್ತಿಯಾಗಿತ್ತು. 89 ವರ್ಷಗಳ ನಂತರ 2022ರಲ್ಲಿ 2ನೇ ಬಾರಿಗೆ ತುಂಬಿತ್ತು. 2025 ಜನವರಿಯಲ್ಲಿ 3ನೇ ಬಾರಿಗೆ, ಇದೀಗ ವರ್ಷದಲ್ಲಿ 2ನೇ ಬಾರಿಗೆ ತುಂಬಿ ಕೋಡಿ ಬಿದ್ದಿದೆ. ವೇದಾವತಿ ನದಿಗೆ ಭದ್ರಾ ಮೇಲ್ದಂಡೆ ನೀರು ಹರಿಸಲಾಗುತ್ತಿದೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *