Breaking News

ಲಾಡ್ಜ್ ನಲ್ಲಿ ಯುವಕ ಶವವಾಗಿ ಪತ್ತೆ ಪ್ರಕರಣ: ಮರಣೋತ್ತರ ವರದಿಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ.

ಬೆಂಗಳೂರಿನ ಮಡಿವಾಳ ಬಳಿಯ ಲಾಡ್ಜ್ ವೊಂದರಲ್ಲಿ ಪುತ್ತೂರು ಮೂಲದ ಯುವಕ ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಯುವಕನ ಮರಣೋತ್ತರ ಪರೀಕ್ಷಾ ವರದಿ ಬಹಿರಂಗವಾಗಿದೆ.ಆತನಿಗೆ ಲಿವರ್ ಸಮಸ್ಯೆಕೂಡ ಇತ್ತು ಎಂಬ ಆಘಾತಕಾರಿ ಅಂಶ ಬಯಲಾಗಿದೆ. ಕೆಲ ದಿನಗಳ ಹಿಂದೆ ಪುತ್ತೂರು ಮೂಲದ ಯುವಕ ಹಾಗೂ ಓರ್ವ ಯುವತಿ ಮಡಿವಾಳ ಬಳಿಯ ಲಾಡ್ಜ್ ನಲ್ಲಿ ತಂಗಿದ್ದರು. 8 ದಿನಗಳ ಕಾಲ ಮಡಿವಾಳ ಬಳಿ ಲಾಡ್ಜ್ ನಲ್ಲಿ ವಾಸವಾಗಿದ್ದರು. ಈ ವೇಳೆ ಯುವಕ ಏಕಾಏಕಿ ಸಾವನ್ನಪ್ಪಿದ್ದ. ಇದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು.ಯುವಕ ಪುತ್ತೂರು ಮೂಲದ ತಕ್ಷಿತ್ ಎಂದು ತಿಳಿದುಬಂದಿತ್ತು. ಯುವಕನ ಸಾವಿಗೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆತನ ಕಿಡ್ನಿ ವೈಫಲ್ಯವಾಗಿತ್ತು. ಅಲ್ಲದೇ ಯುವಕ ಲಿವರ್ ಸಮಸ್ಯೆ ಹಾಗೂ ಅಸ್ತಮಾದಿಂದ ಬಳಲುತ್ತಿದ್ದ ಎಂದು ತಿಳಿದುಬಂದಿದೆ. ಆರೋಗ್ಯ ಸಮಸ್ಯೆಯಿಂದಲೇ ಯುವಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *