Breaking News

ಬೆಂಗಳೂರಲ್ಲಿ ಲವ್ ಜಿಹಾದ್; ಮೋಸ, ಬೆದರಿಕೆ, ಮತಾಂತರ ಒತ್ತಡ; ಇಶಾಕ್ ವಿರುದ್ಧ ದೂರು

ಬೆಂಗಳೂರಿನಲ್ಲಿ ಯುವತಿಯೊಬ್ಬಳು ಮೊಹಮ್ಮದ್ ಇಶಾಕ್ ಎಂಬಾತನ ವಿರುದ್ಧ ಮದುವೆ ವಂಚನೆ ದೂರು ದಾಖಲಿಸಿದ್ದಾಳೆ. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ನಂತರ ಮತಾಂತರವಾಗುವಂತೆ ಒತ್ತಡ ಹೇರಿದ್ದಾನೆ ಎಂದು ಆರೋಪಿಸಲಾಗಿದೆ.ದಾಸರಹಳ್ಳಿ ಖಾಸಗಿ ಹೋಟೆಲ್‌ನಲ್ಲಿ ರೂಮ್ ಬುಕ್ ಮಾಡಿದ್ದ ಇಶಾಕ್, ಯುವತಿಯನ್ನು ಕರೆಸಿಕೊಂಡಿದ್ದನು. ಈ ವೇಳೆ ಮದುವೆಯ ಭರವಸೆ ನೀಡಿ ಆಕೆಯೊಂದಿಗೆ ಸಂಪರ್ಕ ಬೆಳೆಸಿದ್ದಾನೆ. ನಂತರ ಹಲವು ಬಾರಿ ಸಂಪರ್ಕ ಬೆಳೆಸಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಕೆಲವು ದಿನಗಳ ನಂತರ ಬೇರೆ ಯುವತಿಯರ ಜೊತೆ ಇಶಾಕ್ ಸಂಪರ್ಕ ಹೊಂದಿರುವ ವಿಷಯ ಗೊತ್ತಾಗಿದೆ.ಸಂತ್ರಸ್ತೆ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ದೂರು ದಾಖಲಿಸಿದ್ದರು. ಈ ಎಲ್ಲಾ ಘಟನೆ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರೋದರಿಂದ ಪ್ರಕರಣ ವರ್ಗಾಯಿಸಲಾಗಿದೆ. ಸದ್ಯ ಪ್ರಕರಣ ಅಮೃತಹಳ್ಳಿ ಠಾಣೆಗೆ ವರ್ಗಾವಣೆಯಾಗಿದೆ. ನ್ಯಾಯ ಕೊಡಿಸುವಂತೆ ಸಂತ್ರಸ್ತೆ ಮನವಿ ಮಾಡಿಕೊಂಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *