Breaking News

ದಿಲ್ಲಿ ಬಳಿ ಬಿಹಾರದ ಕುಖ್ಯಾತ ರೌಡಿ ರಂಜನ್ ಪಾಠಕ್ ಮತ್ತು ಸಹಚರರ ಎನ್ ಕೌಂಟರ್

ಬಿಹಾರದ ಕುಖ್ಯಾತ ರೌಡಿ ರಂಜನ್ ಪಾಠಕ್ ಸೇರಿದಂತೆ ನಾಲ್ವರನ್ನು ದಿಲ್ಲಿಯ ದಕ್ಷಿಣ ಭಾಗವಾದ ರೋಹಿಣಿ ಪ್ರದೇಶದಲ್ಲಿ ಇಂದು ನಡೆದ ಎನ್‍ ಕೌಂಟರ್ ಹತ್ಯೆಗೈಯ್ಯಲಾಗಿದೆ.ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ಹಾಗೂ ಅಭ್ಯರ್ಥಿಗಳಿಗೆ ಬೆದರಿಕೆ ಒಡ್ಡಲು ರಂಜನ್ ಪಾಠಕ್ ಮತ್ತವನ ತಂಡ ಸಕ್ರಿಯವಾಗಿತ್ತು ಎನ್ನಲಾಗಿದೆ. ಈ ತಂಡದ ಬಂಧನಕ್ಕೆ ಬಿಹಾರ ಪೊಲೀಸರು ಕಳೆದ ಹಲವು ದಿನಗಳಿಂದ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು.ಖಚಿತ ಸುಳಿವನ್ನಾಧರಿಸಿ, ಇಂದು ಬೆಳಗಿನ ಜಾವ 2.30ರ ವೇಳೆಗೆ ರೋಹಿಣಿ ರಸ್ತೆಯಲ್ಲಿ ಆರೋಪಿಗಳನ್ನು ಬಂಧಿಸಲು ಪೊಲೀಸರು ತೆರಳಿದಾಗ, ಅವರತ್ತ ರಾಜನ್ ಪಾಠಕ್ ಹಾಗೂ ಆತನ ಸಹಚರರು ಪೊಲೀಸರತ್ತ ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪ್ರತಿ ದಾಳಿ ನಡೆಸಿದ ಪೊಲೀಸರು, ಅವರನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ.ಈ ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಾಲ್ವರೂ ಆರೋಪಿಗಳನ್ನು ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ರಂಜನ್ ಪಾಠಕ್ ಹಾಗೂ ಆತನ ಸಹಚರರ ವಿರುದ್ಧ ಬಿಹಾರದಲ್ಲಿ ಅನೇಕ ಕೊಲೆ, ಬೆದರಿಕೆ, ದರೋಡೆ, ಅಕ್ರಮ ಶಸ್ತ್ರಾಸ್ತ್ರ ಸಂಗ್ರಹಣ ಪ್ರಕರಣಗಳು ದಾಖಲಾಗಿದ್ದವು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *