Breaking News

ಬೆಂಗಳೂರು : ಮನೆಗೆ ನುಗ್ಗಿ ಗಂಡಸರ ಕಟ್ಟಿ ಹಾಕಿ ಗ್ಯಾಂಗ್‌ ರೇಪ್

ಮನೆಯೊಂದಕ್ಕೆ ನುಗ್ಗಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಹಣ ಮತ್ತು ಮೊಬೈಲ್ ಫೋನ್‌ಗಳ ದೋಚಿದ ಆರು ಮಂದಿ ದರೋಡೆಕೋರರನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದು ಆತನಿಗಾಗಿ ಶೋಧ ನಡೆದಿದೆ.ಬಳಿಕ ಮೂವರು ದುಷ್ಕರ್ಮಿಗಳು ಮಹಿಳೆಯನ್ನು ಪಕ್ಕದ ಮನೆಗೆ ಎಳೆದೊಯ್ದು ಸಾಮೂಹಿಕ ಅತ್ಯಾ*ರ ಎಸಗಿದ್ದಾರೆ. ಉಳಿದ ಮೂವರು ಆರೋಪಿಗಳು ಮನೆಯಲ್ಲಿದ್ದ ಹಣ ಮತ್ತು ಮೊಬೈಲ್ ಫೋನ್‌ಗಳನ್ನು ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.

ಪೊಲೀಸರಿಗೆ ಮಾಹಿತಿ: ನಂತರ ಸಂತ್ರಸ್ತೆಯ 14 ವರ್ಷದ ಮಗ ಧೈರ್ಯ ಮಾಡಿ ಪೊಲೀಸ್ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ. ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲೇ ಆರೋಪಿಗಳು ಪರಾರಿಯಾಗಿದ್ದರು. ವಿಚಾರ ತಿಳಿದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಗ್ಯಾಂಗ್‌ ರೇಪ್ ಮತ್ತು ಡಕಾಯಿತಿ ಪ್ರಕರಣ ದಾಖಲಿಸಲಾಗಿದೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *