ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಕೂಡ ಇಲ್ಲದೇ ರೋಗಿಗಳು ಪರದಾಡುತ್ತಿದ್ದು, ಶಾಸಕರು, ಆರೋಗ್ಯ ಇಲಾಖೆ ವಿರುದ್ಧ ಜನ ಆಕ್ರೋಶ ಹೊರಹಾಕಿದ್ದಾರೆ.ಕಳೆದ ಎರಡು ದಿನಗಳಿಂದ ಆಸ್ಪತ್ರೆಯ ವಿದ್ಯುತ್ ಸಂಪರ್ಕ ಕಡಿತವಾಗಿದ್ದು, ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳದೆ ರೋಗಿಗಳ ಜೊತೆ ವೈದ್ಯರ ಚೆಲ್ಲಾಟವಾಡುತ್ತಿದ್ದಾರೆ ಎಂದು ರೋಗಿಗಳು ಆರೋಪಿಸಿದ್ದಾರೆ
ಆಸ್ಪತ್ರೆಯ ವೈದ್ಯಾಧಿಕಾರಿ ನಿರ್ಲಕ್ಷಕ್ಕೆ ರಾತ್ರಿ ಸ್ಥಳೀಯರಿಂದ ಪ್ರತಿಭಟನೆ ನಡೆಸಿದ್ದು, ಮುಖ್ಯ ವೈದ್ಯಾಧಿಕಾರಿ ಡಾ.ವಿರೇಶ್ ಶೆಟ್ಟರ್ ವಿರುದ್ಧ ರೋಗಿಗಳು, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.ಅಸಮರ್ಪಕ ಚಿಕಿತ್ಸೆ, ಸ್ವಚ್ಛತೆ ಕೊರತೆ, ಜನರಲ್ ವಾರ್ಡನಲ್ಲೇ ಗ್ಯಾಂಗ್ರೀನ್ ರೋಗಿಗೆ ಚಿಕಿತ್ಸೆ ನೀಡಲಾಗುತ್ತಿದೆ ಪ್ರತ್ಯೇಕ ಕೊಠಡಿಯಲ್ಲಿ ಇರಿಸಿ ಚಿಕಿತ್ಸೆ ಕೊಡಿಸುವಂತೆ ರೋಗಿಗಳ ಸಂಬಂಧಿಕರ ಒತ್ತಾಯಿಸಿದರು ಕೂಡ ಕಿವಿಗೆ ಹಾಕಿಕೊಳ್ಳದೇ ಅದನ್ನೇ ಮುಂದುವರೆಸಿದ್ದಾರೆ ಎಂದು ರೋಗಿಗಳ ಸಂಬಂಧಿಕರು ಆರೋಪಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

