ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ನಡೆಸಿದ ಕಾರ್ಯಾಚರಣೆಯಲ್ಲಿ ಅಂದಾಜು 5.5 ಕೋಟಿ ಮೌಲ್ಯದ 1.047 ಕೆ.ಜಿ. ಎಂಡಿಎಂಎ ಕ್ರಿಸ್ಟಲ್ ಮತ್ತು 3 ಕೆ.ಜಿ. ಹೈಡ್ರೋಗಾಂಜಾ ವಶಪಡಿಸಿಕೊಳ್ಳಲಾಗಿದೆ.ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಂಗ್ರಹದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಮಾದಕ ದ್ರವ್ಯ ನಿಗ್ರಹ ದಳದ ಪಿಐ ವಿ.ಡಿ.ಶಿವರಾಜು ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಇನ್ನು ಬಂಧಿತರಿಂದ ಅಂದಾಜು 2.5 ಕೋಟಿ ರೂ. ಮೌಲ್ಯದ 1,047 ಕೆ.ಜಿ. ತೂಕದ ಎಂಡಿಎಂಎ ಕ್ರಿಸ್ಟೆಲ್ ಮತ್ತು 42,800 ರೂ. ನಗದನ್ನು ವಶಕ್ಕೆ ಪಡೆಯಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

