Breaking News

ನೇತ್ರಾವತಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಂಟ್ವಳ ಮಹಿಳೆಯೋರ್ವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸರಪಾಡಿ ಎಂಬಲ್ಲಿ ಇಂದು (ಅ.25ರ ಶನಿವಾರ) ಮಧ್ಯಾಹ್ನ ವೇಳೆ ನಡೆದಿದೆ.ಅಲ್ಲಿಪಾದೆಯಿಂದ ಬಂದ ಈಕೆ ಸರಪಾಡಿಯಲ್ಲಿ ಅಂಗಡಿಯೊಂದಕ್ಕೆ ಹೋಗಿದ್ದು ಬಳಿಕ ನೇರವಾಗಿ ನೇತ್ರಾವತಿ ನದಿ ಬದಿಗೆ ಬಂದಿದ್ದಾರೆ.ಸರಪಾಡಿಯಿಂದ ಬರಿಮಾರು ಕಡವಿನ ಬಾಗಿಲಿಗೆ ಜನಸಾಗಿಸುವ ದೋಣಿಯ ನಾವಿಕ ಅಲ್ಲೇ ಇದ್ದು ಅವರನ್ನು ಕಡವಿನ ಬಾಗಿಲಿಗೆ ಬರುವವರಿದ್ದೀರಾ ? ಎಂದು ಕೇಳಿದ್ದಾರೆ. ಆದರೆ ಈಕೆ ನಾನು ಬರುವುದಿಲ್ಲ ಎಂದು ಹೇಳಿ ಅಲ್ಲೇ ಉಳಿದುಕೊಂಡಿದ್ದಾರೆ. ಅದಾದ ಬಳಿಕ ನಾವಿಕ ದೋಣಿಯನ್ನು ಕಡವಿನ ಬಾಗಿಲಿಗೆ ಕೊಂಡುಹೋಗಿದ್ದು, ಕೆಲವೇ ಹೊತ್ತಿನಲ್ಲಿ ಇವರು ನದಿಗೆ ಹಾರಿದ್ದಾರೆ.
ಈ ಸಂದರ್ಭದಲ್ಲಿ ಅಲ್ಲೇ ನದಿಯಿಂದ ಮರಳು ತೆಗೆಯುವ ಕಾರ್ಮಿಕರು ನೋಡಿ ಕೂಡಲೇ ನದಿಗೆ ಹಾರಿ ಬದುಕಿಸುವ ಪ್ರಯತ್ನ ಮಾಡಿದ್ದಾರೆಯಾದರೂ ಪ್ರಯತ್ನ ಫಲ ನೀಡದೆ ಅವರು ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *