Breaking News

ತೆಲಂಗಾಣ :ಬಸ್ ಪಲ್ಟಿ… 20 ಮಂದಿಗೆ ಗಾಯ!!

ಹೈದರಾಬಾದ್ ನಿಂದ ಆಂಧ್ರಪ್ರದೇಶಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಐಷಾರಾಮಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಪಲ್ಟಿಯಾದ ಪರಿಣಾಮ ಇಪ್ಪತ್ತು ಮಂದಿ ಗಾಯಗೊಂಡಿರುವ ಘಟನೆ ಶನಿವಾರ (ಅ.25) ಬೆಳಿಗ್ಗೆ ಸಂಭವಿಸಿದೆ .ಬಸ್ಸಿನಲ್ಲಿದ್ದ ಎಲ್ಲಾ 20 ಮಂದಿಯೂ ಗಾಯಗೊಂಡಿದ್ದು ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ .ಬಸ್ಸು ಶನಿವಾರ ಮುಂಜಾನೆ ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯ ಪೆದ್ದಾ ಅಂಬರ್ ‌ ಪೇಟೆಯ ತಿರುವಿನಲ್ಲಿ ಸಂಚರಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಬಲ ಬದಿಯ ತಡೆ ಬೇಲಿಗೆ ಢಿಕ್ಕಿ ಹೊಡೆದು ಕಂದಕಕ್ಕೆ ಬಿದ್ದಿದೆ . ಘಟನೆ ಸಂಭವಿಸಿದ ಕೂಡಲೇ ಪೊಲೀಸರು ಹಾಗೂ ಸ್ಥಳೀಯರು ತೆರಳಿ ಬಸ್ಸಿನಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ .

Share News

About BigTv News

Check Also

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ: ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಪರಿಶೀಲನೆ ನಡೆಸಿದರು. …

Leave a Reply

Your email address will not be published. Required fields are marked *