Breaking News

ಮಕ್ಕಳನ್ನು ಕಾಡಿಗೆ ಕರೆದುಕೊಂಡು ಹೋಗಿ ಕತ್ತುಸೀಳಿ ಕೊಂದ ಪಾಪಿ ತಂದೆ!!

ಮಹಾರಾಷ್ಟ್ರದ ವಾಶಿಮ್‌ ಜಿಲ್ಲೆಯ ಬುಲ್ದಾನಾದಲ್ಲಿ ಗಂಡ-ಹೆಂಡತಿ ನಡುವಿನ ಜಗಳ ಅಮಾಯಕ ಅವಳಿ ಮಕ್ಕಳ ಕತ್ತು ಸೀಳಿ ಕೊಲೆಯಾಗುವುದರೊಂದಿಗೆ ಅಂತ್ಯವಾಗಿದೆ. ಅವಳಿ ಮಕ್ಕಳನ್ನು ಕೊಂದ ವ್ಯಕ್ತಿಯನ್ನು ರಾಹುಲ್‌ ಚವಾಣ್‌ ಎಂದು ಗುರುತಿಸಲಾಗಿದೆ. ಗಂಡ-ಹೆಂಡತಿ ನಡುವೆ ಗಲಾಟೆ ಆಗುತ್ತಿದ್ದ ಸಮಯದಲ್ಲಿಯೇ ಸಿಟ್ಟಿಗೆದ್ದ ಹೆಂಡತಿ ಇಡೀ ಕುಟುಂಬವನ್ನೇ ತೊರೆದು ತವರುಮನೆಗೆ ಸೇರಿಕೊಂಡಿದ್ದಳು.ಹೆಂಡತಿ ತನ್ನ ಬಿಟ್ಟು ತವರು ಮನೆಗೆ ಹೋದ ಸಿಟ್ಟಿನಲ್ಲಿಯೇ ಆ ವ್ಯಕ್ತಿ ತನ್ನ ಎರಡು ವರ್ಷದ ಅವಳಿ ಮಕ್ಕಳನ್ನು ಕಾಡಿಗೆ ಕರೆದುಕೊಂಡು ಹೋಗಿ ಅವರ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ನಂತರ ಪೊಲೀಸ್‌ ಠಾಣೆಗೆ ನಡೆದುಕೊಂಡು ಹೋಗಿ ತಾನು ಆ ಮಕ್ಕಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *