Breaking News

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನ

ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ.ಕೊಡೇಕಲ್ ಠಾಣೆಯಲ್ಲಿ ನಾಪತ್ತೆ ಹಾಗೂ ಅಪಹರಣ ಕುರಿತಾಗಿ ಪ್ರಕರಣ.ಪೊಲೀಸ್ ಠಾಣೆಯವರರು ಕಾಲುವೆಯಲ್ಲಿ ಗುರುತು ಸಿಗದ ಸ್ಥಿತಿಯಲ್ಲಿದ ಶವದ ಫೋಟೋವನ್ನು ಕೊಡೇಕಲ್ ಪೊಲೀಸ್ ಅಪ್ರಾಪ್ತ ಸೌಜನ್ಯಳ ಪಾಲಕರು ಇವಳು ತಮ್ಮ ಮಗಳು ಎಂದು ಗುರುತಿಸಿದ್ದಾರೆ.ಕೊಲೆಯೇ ಆಗಿದ್ದರೆ ಆರೋಪಿಗಳನ್ನು ಬಂಧಿಸುವುದಾಗಿ ಸಿಪಿಐ ರವಿಕುಮಾರ ಹೇಳಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ.

Share News

About BigTv News

Check Also

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ …

Leave a Reply

Your email address will not be published. Required fields are marked *