Breaking News

ಲಾರಿ ಡಿಕ್ಕಿ: ಬೈಕ್‌ ಸವಾರ ಸಾವು

ಬೆಂಗಳೂರು ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಮೆಂಟ್ ಮಿಕ್ಸರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ವಿದ್ಯಾರಣ್ಯಪುರದ ದರ್ಶನ್‌ (57) ಮೃತ ಸವಾರ. ನಿವೇಶನ ಖರೀದಿಗೆಂದು ದರ್ಶನ್ ಅವರು ಬೈಕ್‌ನಲ್ಲಿ ತೆರಳುತ್ತಿದ್ದರು.ಸಾತನೂರು- ಬಾಗಲೂರು ರಸ್ತೆಯಲ್ಲಿ ವೇಗವಾಗಿ ಬಂದ ಲಾರಿ, ಬೈಕ್‌ಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ದರ್ಶನ್ ಅವರು ಮೃತಪಟ್ಟಿದ್ದಾರೆ ಎಂದು ಸಂಚಾರ ಪೊಲೀಸರು ಹೇಳಿದರು.ಅಪಘಾತ ಮಾಡಿದ ಬಳಿಕ ಲಾರಿ ಚಾಲಕ ಸ್ಥಳದಲ್ಲೇ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದರು. ಚಿಕ್ಕಜಾಲ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *