Breaking News

18 ವರ್ಷದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಕೊಲೆಗೈದು ಕಾಲುವೆಗೆ ಬಿಸಾಕಿದ ದುರುಳರು

18 ವರ್ಷದ ಯುವತಿ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಹುನಸಗಿ ತಾಲೂಕಿನ ಕೊಡೆಕಲ್ ಗ್ರಾಮದಲ್ಲಿ ನಡೆದಿದೆ.18 ವರ್ಷದ ಸೌಜನ್ಯಾ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ದುಷ್ಕರ್ಮಿಗಳು ಮಗಳನ್ನು ಕಿಡ್ನ್ಯಾಪ್ ಮಾಡಿ ಕೊಲೆಗೈದು ಕಾಲುವೆಗೆ ಬಿಸಾಕಿದ್ದಾರೆ ಎಂದು ಸೌಜನ್ಯಾ ತಂದೆ ಆರೋಪಿಸಿದ್ದಾರೆ.ಚಿರು, ಪಾಂಡಾ, ರಾಜೇಶ್ ಎಂಬುವವರು ಮಗಳನ್ನು ಕಿಡ್ನ್ಯಾಪ್ ಮಾಡಿ ಕೊಲೆಗೈದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಕೊಡೆಕಲ್ ಠಾಣೆಯಲ್ಲಿ ದೂರು ನೀಡಲು ಹೋದರೆ ಪೊಲೀಸರು ದೂರು ದಾಖಲಿಸಿಕೊಳ್ಳುತ್ತಿಲ್ಲ ಎಂದು ಯುವತಿ ತಂದೆ ಅಳಲುತೋಡಿಕೊಂಡಿದ್ದಾರೆ.ತಕ್ಷಣ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *