ದೀಪಾವಳಿ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಎಲ್ಲೆಂದರಲ್ಲಿ ಜಿಲ್ಲೆಯ ಇಸ್ಪಿಟ್ ಅಡ್ಡೆಗಳ ಮೇಲೆ ದಾಳಿ ನಡೆಸಿದ ಧಾರವಾಡ ಜಿಲ್ಲಾ ಪೊಲೀಸರು 492 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳಿಂದ 4.41ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 20ರಿಂದ 23ರವರೆಗೆ ಒಟ್ಟು 9 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 54 ಕಡೆಗಳಲ್ಲಿ ಈ ದಾಳಿ ನಡೆಸಲಾಗಿದೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 11, ಗರಗ ಠಾಣೆಯಲ್ಲಿ 10, ನವಲಗುಂದ ಠಾಣೆಯಲ್ಲಿ 8, ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ 6, ಕುಂದಗೋಳ ಠಾಣೆಯಲ್ಲಿ 5, ಅಣ್ಣಿಗೇರಿ ಠಾಣೆಯಲ್ಲಿ 5, ಗುಡಗೇರಿ ಠಾಣೆಯಲ್ಲಿ 5, ಕಲಘಟಗಿ ಠಾಣೆಯಲ್ಲಿ 3 ಹಾಗೂ ಅಳ್ನಾವರ ಪೊಲೀಸ್ ಠಾಣೆಯಲ್ಲಿ 1 ಸೇರಿದಂತೆ ಒಟ್ಟು 54 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಎಸ್.ಪಿ.ಗುಂಜನ್ ಆರ್ಯ ಉದಯವಾಣಿ ಗೆ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

