Breaking News

ಕಾಲೇಜು ಬಳಿ ಮೂವರು ಯುವಕರಿಂದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ

ದೆಹಲಿಯ ಕಾಲೇಜಿನ ಬಳಿ ಮೂವರು ಯುವಕರು 20 ವರ್ಷದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ. ಹಾಡಹಗಲೇ ಈ ಘಟನೆ ನಡೆದಿದೆ. ಜಿತೇಂದರ್ ಎಂಬಾತ ತನ್ನ ಇನ್ನಿಬ್ಬರು ಸ್ನೇಹಿತರಾದ ಇಶಾನ್ ಮತ್ತು ಅರ್ಮಾನ್ ಜತೆ ಲಕ್ಷ್ಮೀಬಾಯಿ ಕಾಳೇಜಿನ ಬಳಿ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾರೆ.ಆಕೆ ಮುಖವನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ ಕಾರಣ ಕೈಗಳಿಗೆ ಗಂಭೀರ ಗಾಯಗಳಾಗಿವೆ. ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ತನಿಖೆ ಆರಂಭಿಸಿದ್ದಾರೆ.ಬೈಕ್​​ನಲ್ಲಿ ಬಂದು ಆ್ಯಸಿಡ್ ಎರಚಿ ಪರಾರಿಯಾದ ಮೂವರು ಆರೋಪಿಗಳನ್ನು ಬಂಧಿಸಲು ಹಲವು ತಂಡಗಳನ್ನು ರಚಿಸಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *