Breaking News

ಚಾಕುವಿನಿಂದ ಹಲ್ಲೆ ನಡೆಸಿ ಚಿನ್ನದ ಸರ ದೋಚಲು ಯತ್ನ

ನಗರದ ಹಂಡುವಿನಹಳ್ಳಿ ಬಡಾವಣೆಯಲ್ಲಿ ಶನಿವಾರ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಇರಿದು, ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆಸಿದ್ದಾರೆ.ಹದಿನಾರು ಗ್ರಾಮದ ರಾಜೇಂದ್ರ ಹಾಗೂ ಪತ್ನಿ ಸಂಗೀತಾ ಶನಿವಾರ ಸಂಜೆ ನಗರದ ಹಂಡುವಿನಹಳ್ಳಿ ಬಡಾವಣೆಯ ಮುಖ್ಯರಸ್ತೆಯಲ್ಲಿ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಸವಾರ ರಾಜೇಂದ್ರರನ್ನು ತಳ್ಳಿ ಬೀಳಿಸಿ ಚಾಕುವಿನಿಂದ ಹೊಟ್ಟೆಯ ಭಾಗಕ್ಕೆ ಚುಚ್ಚಿದ್ದರು.ಸಂಗೀತಾ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಳ್ಳವ ಪ್ರಯತ್ನದಲ್ಲಿದ್ದಾಗ ಎದುರಿನಿಂದ ವಾಹನವೊಂದು ಬಂದಿದ್ದು, ಪರಾರಿಯಾಗಿದ್ದಾರೆ.ಗಾಯಾಳು ರಾಜೇಂದ್ರ ಅವರನ್ನು ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂಜನಗೂಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *