Breaking News

ಹೂವಿನಹಡಗಲಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರ ಆತ್ಮಹತ್ಯೆ

ಹುಬ್ಬಳ್ಳಿಯ ಉದ್ಯಮಿ ಹಾಗೂ ಸಿವಿಲ್ ಗುತ್ತಿಗೆದಾರ ಆನಂದ ಉಮೇಶ್ ಹೆಗಡೆ (40) ಅವರು ಪಟ್ಟಣದ ದಾಕ್ಷಾಯಣಿ ಲಾಡ್ಜ್‌ನಲ್ಲಿ ಭಾನುವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹುಬ್ಭಳ್ಳಿಯ ಭವಾನಿ ನಗರ ನಿವಾಸಿಯಾದ ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.ಸೋಮವಾರ ಬೆಳಿಗ್ಗೆ ಕುಟುಂಬದವರು ಅನೇಕ ಬಾರಿ ಕರೆ ಮಾಡಿದರೂ ಸ್ವೀಕರಿಸದೇ ಇದ್ದಾಗ ಲಾಡ್ಜ್ ಸ್ವಾಗತಕಾರರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕೊಠಡಿಯ ಬಾಗಿಲು ತಟ್ಟಿದರೂ ತೆರೆಯದೇ ಇದ್ದಾಗ ಲಾಡ್ಜ್ ಸಿಬ್ಬಂದಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ರೂಂ ತೆರೆಸಿದಾಗ ಕಿಟಕಿಯ ಸರಳಿಗೆ ಬಟ್ಟೆಯಿಂದ ನೇಣು ಬಿಗಿದುಕೊಂಡಿರುವುದು ಗೊತ್ತಾಗಿದೆ.’ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕುಟುಂಬದವರು ಆಗಮಿಸಿ ದೂರು ನೀಡಿದ ಬಳಿಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.ಆನಂದ ಹಾಗೂ ಸ್ನೇಹಿತರಾದ ಸುಧೀಂದ್ರ, ಗೌರೀಶ ಅವರು ಪಾಲುದಾರಿಕೆಯಲ್ಲಿ ಕಂಪನಿಯೊಂದನ್ನು ಸ್ಥಾಪಿಸಿ, ಅದರ ಹೆಸರಲ್ಲಿ ಟೆಂಡರ್‌ಗಳನ್ನು ಪಡೆದು ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *