Breaking News

ಕುಸಿದುಬಿದ್ದು ಆಟೋ ಚಾಲಕ ಸಾವು

ಸರಕು ಸಾಗಾಣಿಕೆ ಆಟೋದ ಚಾಲಕನೊಬ್ಬ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ತಲಘಟ್ಟಪುರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನವೀನ್‌ಕುಮಾರ್‌(25) ಮೃತ ಚಾಲಕ. ಭುವನೇಶ್ವರಿ ನಗರದಲ್ಲಿ ತಮ ಅಣ್ಣ ವಸಂತ್‌ ಅವರೊಂದಿಗೆ ನವೀನ್‌ಕುಮಾರ್‌ ವಾಸವಾಗಿದ್ದು ಟಾಟಾಏಸ್‌‍ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದರು.ಕಳೆದ ಎರಡು ದಿನಗಳ ಹಿಂದೆ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮನೆ ಹತ್ತಿರದ ಆಸ್ಪತ್ರೆಯೊಂದರಲ್ಲಿ ನವೀನ್‌ ಕುಮಾರ್‌ ಚಿಕಿತ್ಸೆ ಪಡೆದಿದ್ದರು. ಆದರೆ ಮುಂಜಾನೆ 4 ಗಂಟೆ ಸಂದರ್ಭದಲ್ಲಿ ಪುನಃ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಕಿಮ್ಸೌ ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ಮಾರ್ಗಮಧ್ಯೆ ಆತ ಕೊನೆಯುಸಿರೆಳೆದಿದ್ದಾರೆ. ಘಟನೆ ಕುರಿತಂತೆ ಈಗ ತಲಘಟ್ಟಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *