Breaking News

ರಾಜ್ಯದಲ್ಲಿ ಮತ್ತೊಂದು `ಬೆಚ್ಚಿ ಬೀಳಿಸುವ’ ಕೃತ್ಯ : ಸರ್ಕಾರಿ ಶಾಲೆ ಶಿಕ್ಷಕಿಯ ವಿವಸ್ತ್ರಗೊಳಿಸಿ ಸೀರೆಯಿಂದ ಮರಕ್ಕೆ ಕಟ್ಟಿ ಹಾಕಿ ಹಲ್ಲೆ.!

ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ, ಸೀರೆಯಿಂದ ಮರಕ್ಕೆ ಕಟ್ಟಿ ಹಾಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ.ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಶಾಲೆ ಮುಗಿಸಿ ಮನೆಗೆ ವಾಪಸ್ ಆಗುವಾಗ 25 ವರ್ಷದ ಶಿಕ್ಷಕಿ ಮೇಲೆ ಹಲ್ಲೆ ನಡೆಸಲಾಗಿದೆ. ಮರಕ್ಕೆ ಕಟ್ಟಿ ಹಾಕಿ ವಿವಸ್ತಗೊಳಿಸಿದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಕೂಗಾಟ ಕೇಳಿ ಸ್ಥಳಕ್ಕೆ ಬಂದ ಶಿಕ್ಷಕಿಯ ಕುಟುಂಬಸ್ಥರು ರಕ್ಷಣೆ ಮಾಡಿದ್ದಾರೆ, ಮಾರಣಾಂತಿಕ ಹಲ್ಲೆಗೊಳಗಾದ ಶಿಕ್ಷಕಿಗೆ ಕೊಪ್ಪ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ 3 ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿದುಬಂದಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *